Current Date 13 May, 2026

"ಕಣ್ಣಿದ್ದು ಕುರುಡರಾಗಿ, ಕಿವಿ ಇದ್ದು ಕಿವುಡರಾಗಿ ಇರೋಣ"; ದರ್ಶನ್ ಫ್ಯಾನ್ಸ್ ನಿರ್ಧಾರ!

ನಟ ದರ್ಶನ್ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಪ್ರಕರಣದಲ್ಲಿ 14 ಮಂದಿ ಆರೋಪಿಗಳನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಅಭಿಮಾನಿಗಳು ಕೂಡ ಕುಗ್ಗಿ ಹೋಗಿದ್ದಾರೆ. ದರ್ಶನ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದರು ಕೆಲ ಅಭಿಮಾನಿಗಳು ಬೆಂಬಲವಾಗಿ ನಿಂತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಬೇರೆ ಸ್ಟಾರ್ ನಟರ ಅಭಿಮಾನಿಗಳು ಹಾಗೂ ದರ್ಶನ್ ಅಭಿಮಾನಿಗಳ ನಡುವೆ ಕೆಸರೆರಚಾಟ ನಡೀತಿದೆ. ಪರ ವಿರೋಧ ಪೋಸ್ಟ್‌ಗಳು ಸದ್ದು ಮಾಡ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ದರ್ಶನ್ ಅಭಿಮಾನಿಗಳು ಒಂದು ನಿರ್ಧಾರಕ್ಕೆ ಬಂದಿದ್ದಾರೆ. ಸದ್ಯಕ್ಕೆ ತಾಳ್ಮೆಯಿಂದ ಇರಲು ತೀರ್ಮಾನಿಸಿದ್ದಾರೆ.


ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹೆಸರು ಕೇಳಿಬಂದಿದೆ. ಪ್ರೇಯಸಿ ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ ಕಾರಣಕ್ಕೆ ಆತನನ್ನು ಅಪಹರಿಸಿ, ಥಳಿಸಲಾಗಿದ್ದು ಜೀವವೇ ಹೋಗಿಬಿಟ್ಟಿದೆ. ನಟ ದರ್ಶನ್ ಸೂಚನೆ ಮೇರೆಗೆ ಈ ಕೆಲಸ ಮಾಡಿದ್ದಾಗಿ ಕೆಲ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗ್ತಿದೆ. ಅದೇ ಕಾರಣಕ್ಕೆ ನಟ ದರ್ಶನ್‌ಗೆ ಸಂಕಷ್ಟ ಎದುರಾಗಿದೆ. ಆರೋಪ ಸಾಬೀತಾದರೆ ಕಠಿಣ ಶಿಕ್ಷೆ ಕಾದಿದೆ.