Current Date 13 May, 2026

"ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ"; ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ ಆರೋಪ


ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡ್ತಿದೆ. ಆತ ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಕಳುಹಿಸಿದ್ದ. ನಟ ದರ್ಶನ್ ಸೂಚನೆಯಂತೆ ಆಪ್ತರು ಆತನನ್ನು ಕರೆತಂದು ಥಳಿಸಿದ್ದರು. ಈ ವೇಳೆ ಆತ ಮೃತಪಟ್ಟಿದ್ದಾರೆ ಪೊಲೀಸರು ಹೇಳಿದ್ದಾರೆ. ಪ್ರಕರಣ ಸಂಬಂಧ 16 ಜನ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ರೇಣುಕಾಸ್ವಾಮಿ ಕೆಟ್ಟದಾಗಿ ಮೆಸೇಜ್ ಮಾಡಿದ್ದು ತಪ್ಪು. ಅದಕ್ಕೆ ದರ್ಶನ್ ಶಿಕ್ಷೆ ಕೊಡಲು ಮುಂದಾಗಿದ್ದು ಕೂಡ ಸರಿಯಲ್ಲ. ಸಾಕಷ್ಟು ಜನ ಇದೇ ಮಾತು ಹೇಳುತ್ತಿದ್ದಾರೆ. ಇದೀಗ ರೇಣುಕಾಸ್ವಾಮಿ ಫೇಕ್ ಅಕೌಂಟ್‌ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ. ಇದೀಗ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ ಕೂಡ ತಮಗೂ ಈ ಅಕೌಂಟ್‌ನಿಂದ ಕೆಟ್ಟ ಮೆಸೇಜ್ ಬಂದಿತ್ತು ಎಂದು ಆರೋಪಿಸಿದ್ದಾರೆ.