ಸೊರಬದ ಕುಟುಂಬ ಮತ್ತು ದ್ವೇಷ ರಾಜಕಾರಣ ಬಹಳ ಚರ್ಚೆಗೆ ಗ್ರಾಸವಾಗುತ್ತಲೇ ಬರುತ್ತಿದೆ. ಮಾಜಿ ಸಿಎಂ ಬಂಗಾರಪ್ಪನವರ ಮಕ್ಕಳಾದ ಕುಮಾರ್ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ನಡುವೆ ಶೀತಲ ಸಮರ ಮುಂದುವರೆದಿದೆ. ಚುನಾವಣೆಗಳ ಸಮಯದಲ್ಲೇ ಅದು ಪದೇ ಪದೆ ಭುಗಿಲೇಳುತ್ತದೆ. ಇನ್ನು ಸಹೋದರಿ ಗೀತಾ ಶಿವರಾಜ್‌ಕುಮಾರ್ ಈ ಬಾರಿ ಶಿವಮೊಗ್ಗದ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದಾರೆ.
ಗೀತಾ ಸಹೋದರ ಮಧು ಬಂಗಾರಪ್ಪ ಜೊತೆ ಗುರ್ತಿಸಿಕೊಂಡಿದ್ದಾರೆ. ಅಣ್ಣ-ತಮ್ಮರ ಜಗಳ ಮುಂದುವರೆದಿದೆ. ಕುಮಾರ್ ಬಂಗಾರಪ್ಪ ಬಿಜೆಪಿ ಪಕ್ಷದಲ್ಲಿದ್ದಾರೆ. ಇನ್ನು ಮಧು ಕಾಂಗ್ರೆಸ್ ಶಾಸಕರಾಗಿದ್ದಾರೆ. ಶಿಕ್ಷಣ ಸಚಿತವಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಈ ಬಾರಿ ಸಹೋದರಿ ಗೀತಾ ಅವರನ್ನು ಶಿವಮೊಗ್ಗ ಕ್ಷೇತ್ರದಲ್ಲಿ ಗೆಲ್ಲಿಸಿಕೊಳ್ಳುವ ಪ್ರಯತ್ನ ಮಾಡಿದ್ದರು. ಆದರೆ ಅದರಲ್ಲಿ ಯಶಸ್ವಿ ಆಗಲಿಲ್ಲ. ಗೀತಾ ಎದುರು ಬಿ. ವೈ ರಾಘವೇಂದ್ರ ಗೆಲುವು ಸಾಧಿಸಿದ್ದಾರೆ.