ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಸದ್ಯ ಕೋರ್ಟ್ ಎಲ್ಲಾ ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಬಗ್ಗೆ ಸುಮಲತಾ ಅಂಬರೀಶ್ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಪೋಸ್ಟ್ ಮಾಡಿದ್ದಾರೆ.
ಪ್ರಕರಣನ ಬಗ್ಗೆ ಈಗಾಗಲೇ ಕನ್ನಡ ಚಿತ್ರರಂಗದ ಹಲವರು ಪ್ರತಿಕ್ರಿಯಿಸಿದ್ದಾರೆ. ಆದರೆ ತಾಯಿ ಸಮಾನರಾದ ಸುಮಲತಾ ಅಂಬರೀಶ್ ಯಾಕೆ ಮೌನವಾಗಿದ್ದಾರೆ ಎಂದು ಕೆಲವರು ಕೇಳುತ್ತಿದ್ದರು. ಈ ವಿಚಾರವನ್ನು ಕೂಡ ಸುಮಲತಾ ಪ್ರಸ್ತಾಪಿಸಿದ್ದಾರೆ. ಜೊತೆಗೆ ರೇಣುಕಾಸ್ವಾಮಿ ಕುಟುಂಬಕ್ಕೆ ನೋವನ್ನು ಭರಿಸಲು ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.