Current Date 09 May, 2026

ಸುಲಿಗೆ ಪ್ರಕರಣ; ರಾಜ್ಯವೇ ಖುಷಿಪಡುವ ಸುದ್ದಿಕೊಟ್ಟಿದ್ದ ದಿವ್ಯಾ ವಸಂತಗೆ ಸಂಕಷ್ಟ


ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, 'ಗಿಚ್ಚಿ ಗಿಲಿಗಿಲಿ' ಶೋ ಸ್ಪರ್ಧಿ ದಿವ್ಯಾ ವಸಂತ ಹೆಸರು ಕೇಳಿಬಂದಿದೆ. ವಾಮಮಾರ್ಗದಲ್ಲಿ ಹಣ ಗಳಿಸಲು ಹೋಗಿ ದಿವ್ಯಾ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಮೊದಲಿಗೆ ಸುದ್ದಿ ವಾಹಿನಿಯ ನಿರೂಪಕಿಯಾಗಿ ಗಮನ ಸೆಳೆದಿದ್ದ ಆಕೆ ಬಳಿಕ ಇನ್‌ಸ್ಟಾಗ್ರಾಂ ರೀಲ್ಸ್, ಯೂಟ್ಯೂಬ್ ವೀಡಿಯೋಗಳಿಂದ ಸದ್ದು ಮಾಡಿದ್ದಳು.

ಜೆ. ಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 'ಸ್ಪಾ'ವೊಂದರ ವ್ಯವಸ್ಥಾಪಕನನ್ನು ಬೆದರಿಸಿ ಹಣ ಸುಲಿಗೆ ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ರಾಜ್‌ನ್ಯೂಸ್ ಸುದ್ದಿವಾಹಿನಿ ಸಿಇಓ ವೆಂಕಟೇಶ್ ಹಾಗೂ ದಿವ್ಯಾ ವಸಂತ ಸಹೋದರ ಸಂದೇಶ್ ಬಂಧನವಾಗಿದ್ದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿದೆ. ಸದ್ಯ ದಿವ್ಯಾ ಸಂತ ನಾಪತ್ತೆಯಾಗಿದ್ದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.