Current Date 15 May, 2026

ಚಂದನ್‌ ಶೆಟ್ಟಿ ನಟನೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೇಲರ್‌ ಬಿಡುಗಡೆ

ಚಂದನ್‌ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದೆ. ಇನ್ನೇನು ಶೀಘ್ರದಲ್ಲಿ ತೆರೆಗೆ ಬರಲಿರುವ ಈ ಚಿತ್ರದಲ್ಲಿ ಶೀರ್ಷಿಕೆಗೆ ತಕ್ಕಂತೆ, ಯುವ ಪೀಳಿಗೆಯ ಕಥೆಯನ್ನೇ ಪ್ರಧಾನವಾಗಿಸಿಕೊಂಡು ಸಿದ್ಧಪಡಿಸಿದ್ದಾರೆ ನಿರ್ದೇಶಕ ಅರುಣ್‌ ಅಮುಕ್ತ.

`ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಟೈಟಲ್ಲೇ ಹೇಳುವಂತೆ ಯೂತ್ಸ್ ಸಬ್ಜೆಕ್ಟ್ ಸಿನಿಮಾ. ಕಾಲೇಜ್ ಹುಡುಗ, ಹುಡುಗಿಯರ, ಹದಿ ಹರೆಯದ ಹುಚ್ಚು ಮನಸ್ಸಿನ ಹೊಯ್ದಾಟವನ್ನು ಇಲ್ಲಿ ತೆರೆದಿಡಲಾಗಿದೆ. ಹಾಗಂತ ಇದು ಮಾಮೂಲಿಯಾಗೋ ಸಿದ್ಧಸೂತ್ರದ ಚೌಕಟ್ಟಿಗೊಳಪಟ್ಟಿಲ್ಲ ಅನ್ನೋದು ಟ್ರೇಲರ್ ಎಳೆಯಲ್ಲಿ ಸ್ಪಷ್ಟವಾಗುತ್ತದೆ. ಹೊಡೆದಾಟ, ಬಡಿದಾಟ, ರ್ಯಾಗಿಂಗ್, ಬಿಸಿ ರಕ್ತದ ಹುಡುಗರ ಪುಂಡಾಟಿಕೆ ಸೇರಿದಂತೆ ಇಲ್ಲಿ ಎಲ್ಲವೂ ಇದೆ.