Current Date 28 Aug, 2026

ಅಜ್ಜಿ ಅಂತ್ಯಕ್ರಿಯೆ ವೇಳೆ ನಡೆದ ಕೆಲ ಘಟನೆಗಳ ಬಗ್ಗೆ ಸಾನ್ವಿ ಸುದೀಪ್ ಅಸಮಾಧಾನ

ನಟ ಸುದೀಪ್ ತಾಯಿ ಸರೋಜಾ ಸಂಜೀವ್ ವಯೋಸಹಜ ಕಾಯಿಲೆಯಿಂದ ಕೊನೆಯುಸಿರೆಳೆದಿದ್ದಾರೆ. ಕುಟುಂಬ ಸದಸ್ಯರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಸಂಜೆ ವೇಳೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸರೋಜಾ ಸಂಜೀವ್ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿತು. ಸುದೀಪ್ ತಾಯಿಯ ಅಂತಿಮ ವಿಧಿ ವಿಧಾನಗಳನ್ನು ಸುದೀಪ್ ನೆರವೇರಿಸಿದ್ದರು. ತಾಯಿಯನ್ನು ಕಳೆದುಕೊಂಡು ಸುದೀಪ್ ಆಘಾತಗೊಂಡಿದ್ದರು. ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸುವ ವೇಳೆ ಬಿಕ್ಕಿ ಬಿಕ್ಕಿ ಅತ್ತರು. ಚಿತ್ರರಂಗದ ಹಲವರು ಸರೋಜಾ ಸಂಜೀವ್ ಅಂತಿಮ ದರ್ಶನ ಪಡೆದರು. ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ಅವರ ತಾಯಿ ಚಿಕಿತ್ಸೆ ಫಲಕಾರಿಯಾಗದೇ ಜಯನಗರದ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾದರು.