ರಾಕಿಂಗ್ ಸ್ಟಾರ್ ಯಶ್ ಹಾಗೂ ಪ್ರಭಾಸ್ ಪ್ಯಾನ್ ಇಂಡಿಯಾ ಸ್ಟಾರ್‌ಗಳಾಗಿ ಅಬ್ಬರಿಸುತ್ತಿದ್ದಾರೆ. ಇಬ್ಬರ ನಡುವೆ ನಡುವೆ ಆತ್ಮೀಯ ಒಡನಾಟವಿದೆ. ಆಗಾಗ್ಗೆ ಪಾರ್ಟಿಗಳಲ್ಲಿ ಭೇಟಿ ಆಗುತ್ತಿರುತ್ತಾರೆ. 'ಸಲಾರ್' ಸಿನಿಮಾ ಮುಹೂರ್ತ ಸಮಾರಂಭಕ್ಕೆ ಯಶ್ ವಿಶೇಷ ಅತಿಥಿಯಾಗಿ ಹೋಗಿದ್ದರು.
ಸದ್ಯ ಯಶ್ 'ಟಾಕ್ಸಿಕ್' ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್‌ನಲ್ಲಿ 'ರಾಮಾಯಣ' ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಮತ್ತೊಂದು ಕಡೆ ಪ್ರಭಾಸ್ 'ಕಲ್ಕಿ 2898 AD' ಸಿನಿಮಾ ಬಿಡುಗಡೆ ಎದುರು ನೋಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಅಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಈ ಸೈನ್ಸ್ ಫಿಕ್ಷನ್ ಸಿನಿಮಾ ತೆರೆಗೆ ಬರಲಿದೆ. ಜೂನ್ 27ಕ್ಕೆ ಸಿನಿಮಾ ತೆರೆಗಪ್ಪಳಿಸಲಿದೆ. ಚಿತ್ರದಲ್ಲಿ ಭೈರವ ಆಗಿ ಪ್ರಭಾಸ್ ನಟಿಸಿದ್ದಾರೆ.