Current Date 25 Aug, 2026

ರಿಷಬ್ ಶೆಟ್ಟಿಯ ಶಿವಾಜಿ ಮಹಾರಾಜ್ ಬಗ್ಗೆ ಸುದೀಪ್ ಮಾತು, ನಿಂತ ನೆಲಕ್ಕೆ ನಿಯತ್ತಾಗಿರಬೇಕು ಎಂದ ಜನ..!

ಕುಂದಾಪುರದವರಾದರೂ ಬೆಂಗಳೂರಿಗೆ ಬಂದು ಕಾಲೇಜು ಮುಗಿಸಿ, ಅದರ ಜೊತೆ ಜೊತೆಗೆ ರಂಗಭೂಮಿಯ ನಂಟಿಗೆ ಬಿದ್ದವರು ರಿಷಬ್ ಶೆಟ್ಟಿ. ಸದಭಿರುಚಿಯ ಚಿತ್ರಗಳನ್ನು ಮಾಡುತ್ತಲೇ ಸೈ ಎನ್ನಿಸಿಕೊಂಡು, ಸ್ಯಾಂಡಲ್ ವುಡ್ ನ ಭರವಸೆಯ ನಿರ್ದೇಶಕ ಕಮ್ ನಾಯಕನಾಗಿ ಗುರುತಿಸಿಕೊಂಡ ರಿಷಬ್‌, ಮೊನ್ನೆಯ ದಿವಸ ಮಹಾರಾಷ್ಟ್ರದವರ ಹೀರೋ ಶಿವಾಜಿ ಮಹಾರಾಜ್ ಅವರ ಜೀವನಾಧಾರಿತ ಚಿತ್ರವನ್ನು ಒಪ್ಪಿಕೊಂಡ ಮೇಲೆ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡದವರಾಗಿ ಶಿವಾಜಿಯ ಅವತಾರವೆತ್ತುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಕೇಳಿ ಬಂದಿತ್ತು. ಪರ ವಿರೋಧದ ಚರ್ಚೆ ಕೂಡ ನಡೆದಿತ್ತು. ರಿಷಬ್ ಶೆಟ್ಟಿ ಯಾವುದೇ ಕಾರಣಕ್ಕೂ ಶಿವಾಜಿ ಮಹಾರಾಜ್ ಪಾತ್ರ ಮಾಡಬಾರದೆನ್ನುವ ಕೂಗು ಕೂಡ ಕೇಳಿ ಬಂದಿತ್ತು.

ಆದರೆ, ಇದಕ್ಕೆ ರಿಷಬ್ ಶೆಟ್ಟಿ ತಲೆ ಕೆಡಿಸಿಕೊಂಡಿಲ್ಲ. ಕೆಡಿಸಿಕೊಳ್ಳುವುದು ಇಲ್ಲ. ಬದಲಿಗೆ ಶಿವಾಜಿ ಪಾತ್ರ ಮಾಡುತ್ತಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದು ಸಂದರ್ಶನದಲ್ಲಿ ರಿಷಬ್ ಹೇಳಿದ್ದರು. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕೂಡ ಬರೆದುಕೊಂಡಿದ್ದರು. ಇದರ ನಡುವೆ ಈಗ ಸುದೀಪ್ ಈ ವಿಚಾರದ ಕುರಿತು ಮಾತನಾಡಿದ್ದಾರೆ. ಈ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.