ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ ನಟಿಸಿರುವ 'ಯುಐ' ಸಿನಿಮಾ ಸೆನ್ಸಾರ್ ಮುಗಿಸಿದೆ. ಮುಂದಿನ ವಾರವೇ ಸಿನಿಮಾ ತೆರೆಗೆ ಬರಲಿದೆ. ಈಗಾಗಲೇ ಚಿತ್ರದ ಭರ್ಜರಿ ಪ್ರಚಾರ ಶುರುವಾಗಿದೆ. ಬಹಳ ವರ್ಷಗಳ ಬಳಿಕ ಉಪೇಂದ್ರ ಮತ್ತೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವುದು ಕುತೂಹಲ ಮೂಡಿಸಿದೆ.
ರೀಷ್ಮಾ ನಾಣಯ್ಯ, ಸಾಧು ಕೋಕಿಲ, ನಿಧಿ ಸುಬ್ಬಯ್ಯ, ಗುರು ಪ್ರಸಾದ್ ಚಿತ್ರದ ತಾರಾಗಣದಲ್ಲಿದ್ದಾರೆ. ಈಗಾಗಲೇ ಚಿತ್ರದ ಟೀಸರ್ ಹಾಗೂ ಸಾಂಗ್ಸ್ ರಿಲೀಸ್ ಆಗಿ ಸಖತ್ ಸದ್ದು ಮಾಡ್ತಿದೆ. ಇತ್ತೀಚೆಗೆ ಬಂದ 'ಯುಐ' ವಾರ್ನರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಕೆ. ಪಿ ಶ್ರೀಕಾಂತ್ ಹಾಗೂ ಜಿ. ಮನೋಹರ್ ಚಿತ್ರಕ್ಕೆ ಹಣ ಹೂಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕಿದೆ.