ಕನ್ನಡ ಚಿತ್ರರಂಗ ಸಂಕಷ್ಟಕ್ಕೆ ಸಿಲುಕಿದೆ. ದೊಡ್ಡ ಸಿನಿಮಾಗಳು ಬರದೇ ಚಿತ್ರಮಂದಿರಗಳಲ್ಲಿ ಪ್ರೇಕ್ಷಕರ ಬರ ಎದುರಿಸುವಂತಾಗಿದೆ. ಮುಂದಿನ ದಿನಗಳಲ್ಲಿ 'ಭೀಮ', 'ಮಾರ್ಟಿನ್', 'ಮ್ಯಾಕ್ಸ್', 'ಯುಐ', 'ಭೈರತಿ ರಣಗಲ್', 'ಕೆಡಿ' ಸೇರಿದಂತೆ ದೊಡ್ಡ ದೊಡ್ಡ ಸಿನಿಮಾಗಳು ಬಿಡುಗಡೆಗೆ ಸಜ್ಜಾಗಿದೆ.
ಸ್ಯಾಂಡಲ್‌ವುಡ್‌ನಲ್ಲಿ ಈಗ ರೇಣುಕಾಸ್ವಾಮಿ ಹತ್ಯೆ ಪ್ರಕರಣ ದೊಡ್ಡದಾಗಿ ಸದ್ದು ಮಾಡ್ತಿದೆ. ಕಾರಣ ಈ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ ಜೈಲು ಸೇರಿರುವುದು. ಕಳೆದೊಂದು ತಿಂಗಳಿಂದ ದರ್ಶನ್ ವಿಚಾರಣಾಧೀನ ಖೈದಿಯಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಇದೇ ವಿಚಾರದ ಬಗ್ಗೆ ಪದೇ ಪದೇ ಚರ್ಚೆ ನಡೆಯುತ್ತಿದೆ. ಈಗಾಗಲೇ ಸಾಕಷ್ಟು ಜನ ತಾರೆಯರು ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.