Current Date 25 Aug, 2026

ಮಾನಸಿಕವಾಗಿ ತುಂಬಾ ನೋವಾಗಿದೆ, ಮಾತನಾಡುವ ಸ್ಥಿತಿಯಲ್ಲಿ ಇಲ್ಲ"; ಎಸ್.ಎಂ ಕೃಷ್ಣ ನಿಧನಕ್ಕೆ ರಮ್ಯಾ ಕಣ್ಣೀರು

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನರಾಗಿದ್ದಾರೆ. ಸುಧೀರ್ಘ ರಾಜಕೀಯ ಜೀವನದಲ್ಲಿ ಬೇರೆ ಬೇರೆ ಹುದ್ದೆಗಳಲ್ಲಿ ಎಸ್‌.ಕೃಷ್ಣ ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕದ ಮುಖ್ಯ ಮಂತ್ರಿಯಾಗಿ, ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿ ಗುರುತಿಸಿಕೊಂಡಿದ್ದರು. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಎಸ್‌ ಎಂ ಕೃಷ್ಣ ಬಳಲುತ್ತಿದ್ದರು.

92ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ ಎಸ್‌ ಎಂ ಕೃಷ್ಣ ಹಲವು ರಾಜಕೀಯ ಮುಖಂಡರಿಗೆ ಗುರುವಾಗಿದ್ದಾರೆ. ಅದರಲ್ಲೂ ರಾಜ್ಯದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ರಮ್ಯಾ ಸೇರಿದಂತೆ ಹಲವರಿಗೆ ರಾಜಕೀಯ ಮಾರ್ಗದರ್ಶನ ನೀಡಿದ್ದಾರೆ. ಇವರ ನಿಧನಕ್ಕೆ ರಾಜಕೀಯ ಮುಖಂಡರು ಕಣ್ಣೀರು ಹಾಕಿದ್ದಾರೆ. ಎಸ್‌ ಎಂ ಕೃಷ್ಣ ನಿಧನದ ಸುದ್ದಿಯನ್ನು ತಿಳಿದಯ ಮೋಹಕತಾರೆ ರಮ್ಯಾ ಭಾವುಕರಾಗಿದ್ದಾರೆ.