Current Date 15 May, 2026

ಜಾಮೀನು ಸಿಗುವುದು ಪಕ್ಕಾ, ಜೈಲಿನಿಂದ ಆಪ್ತರಿಗೆ ದರ್ಶನ್ ಸಂದೇಶ ರವಾನೆ!

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಗೆ ಕ್ಷಣಗಣನೆ ಶುರುವಾಗಿದೆ. ಶತಯಗತಾಯ ಇವತ್ತು(ಅಕ್ಟೋಬರ್ 28) ನೆಚ್ಚಿನ ನಟನಿಗೆ ಬಿಗ್ ರಿಲೀಫ್ ಸಿಗುತ್ತದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಈಗಾಗಲೇ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ದರ್ಶನ್ ಜೈಲು ಸೇರಿ 4 ತಿಂಗಳು ಕಳೆದಿದೆ. ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್‌ ಜಾಮೀನು ಪಡೆಯಲು ಯತ್ನಿಸಿದ್ದರು. ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ಬೇಲ್ ಅರ್ಜಿ ವಿಚಾರಣೆ ನಡೆಸಿ ದರ್ಶನ್ ಪರ ವಕೀಲರ ಮನವಿಯನ್ನು ನ್ಯಾಯಾಲಯ ನಿರಾಕರಿಸಿತ್ತು. ಬಳಿಕ ಹೈಕೋರ್ಟ್‌ನಲ್ಲಿ ಜಾಮೀನು ಪಡೆಯಲು ಅರ್ಜಿ ಸಲ್ಲಿಸಲಾಗಿತ್ತು. ಒಮ್ಮೆ ವಿಚಾರಣೆ ನಡೆಸಿ ಇಂದಿಗೆ ವಿಚಾರಣೆ ಮುಂದೂಡಲಾಗಿತ್ತು.