Current Date 15 May, 2026

ಶ್ರೀಮುರಳಿ 'ಬಘೀರ' ಚಿತ್ರಕ್ಕೆ ಬಿಗ್‌ಬಿ ನಟನೆಯ ಆ ಸಿನಿಮಾ ಸ್ಫೂರ್ತಿನಾ?

ದೀಪಾವಳಿ ಸಂಭ್ರಮದಲ್ಲಿ ಶ್ರೀಮುರಳಿ ನಟನೆಯ 'ಬಘೀರ' ಸಿನಿಮಾ ತೆರೆಗಪ್ಪಳಿಸಲಿದೆ. ಈಗಾಗಲೇ ಚಿತ್ರದ ಟ್ರೈಲರ್, ಸಾಂಗ್ ರಿಲೀಸ್ ಆಗಿ ಧೂಳೆಬ್ಬಿಸಿದೆ. ಮೊದಲ ನೋಟದಲ್ಲೇ ಇದು ಹೈವೋಲ್ಟೇಜ್ ಆಕ್ಷನ್ ಎಂಟರ್‌ಟೈನರ್ ಸಿನಿಮಾ ಎನ್ನುವುದು ಗೊತ್ತಾಗುತ್ತಿದೆ. ಪ್ರಶಾಂತ್ ನೀಲ್ ಕಥೆ ಬರೆದಿರುವುದು ಕುತೂಹಲ ಹೆಚ್ಚಿಸಿದೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ 'ಬಘೀರ' ಚಿತ್ರ ನಿರ್ಮಾಣವಾಗಿದೆ. ದೊಡ್ಡ ಬಜೆಟ್‌ನಲ್ಲೇ ಚಿತ್ರ ಮೂಡಿ ಬಂದಿರುವುದು ಗೊತ್ತಾಗುತ್ತಿದೆ. ಟ್ರೈಲರ್ ನೋಡಿದರೆ ಪ್ರತಿ ಫ್ರೇಮ್ ಹುಬ್ಬೇರಿಸುವಂತಿದೆ. ಖಡಕ್ ಪೋಲಿಸ್ ಆಫೀಸರ್ ಪಾತ್ರದಲ್ಲಿ ರೋರಿಂಗ್ ಸ್ಟಾರ್ ಅಬ್ಬರಿಸಿದ್ದಾರೆ. ನಾಯಕಿಯಾಗಿ ರುಕ್ಮಿಣಿ ವಸಂತ್ ಮಿಂಚಿದ್ದು ಪ್ರಕಾಶ್ ರಾಜ್, ಸುಧಾರಾಣಿ, ರಂಗಾಯಣ ರಘು, ಅಚ್ಯುತ್‌ ಕುಮಾರ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ.