Current Date 15 May, 2026

ಭೈರತಿ ರಣಗಲ್' ಓಪನಿಂಗ್ ಸೀನ್ ರಿವೀಲ್ ಮಾಡಿದ ನರ್ತನ್; ಶಿವಣ್ಣ ಫ್ಯಾನ್ಸ್ ಥ್ರಿಲ್

ನರ್ತನ್ ನಿರ್ದೇಶನದಲ್ಲಿ ಶಿವಣ್ಣ ನಟನೆಯ 'ಭೈರತಿ ರಣಗಲ್' ಸಿನಿಮಾ ಈ ವಾರ ತೆರೆಗೆ ಬರ್ತಿದೆ. ನಗರದ ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ಅದ್ಧೂರಿಯಾಗಿ ಪ್ರೀ ರಿಲೀಸ್ ಈವೆಂಟ್ ನಡೆದಿದೆ. ಚಿತ್ರದ ಬಗ್ಗೆ ಸಾಕಷ್ಟು ಇಂಟ್ರೆಸ್ಟಿಂಗ್ ಸಂಗತಿಯನ್ನು ಚಿತ್ರತಂಡ ಹಂಚಿಕೊಂಡಿದೆ. ತಮ್ಮ ಮುಂದಿನ ಸಿನಿಮಾಗಳ ಬಗ್ಗೆಯೂ ಶಿವಣ್ಣ ಮಾತನಾಡಿದ್ದಾರೆ.

ಸೂಪರ್ ಹಿಟ್ 'ಮಫ್ತಿ' ಪ್ರೀಕ್ವೆಲ್ 'ಭೈರತಿ ರಣಗಲ್'. ಅಂದರೆ ಅಂಡರ್ ಕವರ್ ಪೊಲೀಸ್ ಆಫೀಸರ್ ಗಣ(ಶ್ರೀಮುರಳಿ) ರೋಣಾಪುರಕ್ಕೆ ಎಂಟ್ರಿ ಕೊಡುವುದಕ್ಕೂ ಮುನ್ನ ಅಲ್ಲಿ ನಡೆದ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗ್ತಿದೆ. ತಮ್ಮದೇ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಿಸಿ ಶಿವಣ್ಣ ನಟಿಸಿದ್ದಾರೆ. ಈಗಾಗಲೇ ಟ್ರೈಲರ್, ಸಾಂಗ್ಸ್ ರಿಲೀಸ್ ಆಗಿ ಧೂಳೆಬ್ಬಿಸಿದೆ.