ರಿಯಲ್ ಸ್ಟಾರ್ ಉಪೇಂದ್ರಗೆ ಇಂದು (ಸೆಪ್ಟೆಂಬರ್ 18) ಹುಟ್ಟುಹಬ್ಬದ ಸಂಭ್ರಮ. 56ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವ ಉಪೇಂದ್ರ ಮತ್ತಷ್ಟು ಆಕ್ಟಿವ್ ಆಗಿದ್ದಾರೆ. ಇದೇ ಸಂದರ್ಭದಲ್ಲಿ ಉಪ್ಪಿ ಬಹಳ ದಿನಗಳವರೆಗೆ ನಿರ್ದೇಶಿಸಿ 'ಯುಐ' ಸಿನಿಮಾ ಬಗ್ಗೆ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಉಪೇಂದ್ರ 'ಯುಐ' ಸಿನಿಮಾ ಬಿಡುಗಡೆಯಾಗಿ ಪ್ರೇಕ್ಷಕರು ಎದುರು ನೋಡುತ್ತಿದ್ದಾರೆ. ಆದರೆ, ರಿಲೀಸ್ ಬಗ್ಗೆ ಉಪೇಂದ್ರ ಆಗಲಿ, ಚಿತ್ರತಂಡ ಆಗಲಿ ಕ್ಲಾರಿಟಿ ಕೊಟ್ಟಿಲ್ಲ. ಇನ್ನೂ ಅಡ್ಡಗೋಡೆ ಮೇಲೆ ದೀಪವನ್ನೇ ಇಟ್ಟು ಮಾತಾಡಿದ್ದಾರೆ. ಇಷ್ಟೇ ಅಲ್ಲದೆ, 'ಯುಐ' ಸಿನಿಮಾದ ಥೀಮ್ ಏನು? ಸಿನಿಮಾ ಕಲ್ಕಿ ಬಗ್ಗೆನಾ? ಅನ್ನೋದು ಸಂಗತಿಯನ್ನು ಬಿಟ್ಟುಕೊಟ್ಟಿಲ್ಲ.