ಅಂತೂ ಇಂತೂ ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಚಿತ್ರಕ್ಕೆ ಅಧಿಕೃತವಾಗಿ ಚಾಲನೆ ಸಿಕ್ಕಿದೆ. ಪೂಜೆ ನೆರವೇರಿಸಿ ಚಿತ್ರೀಕರಣಕ್ಕೆ ಮುಂದಾಗಿದೆ. ಗೀತು ಮೋಹನ್ ದಾಸ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಜೊತೆ ಸೇರಿ ಯಶ್ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.
ಕಳೆದ ವರ್ಷ ಡಿಸೆಂಬರ್‌ನಲ್ಲೇ 'ಟಾಕ್ಸಿಕ್' ಸಿನಿಮಾ ಘೋಷಣೆ ಆಗಿತ್ತು. ಬಳಿಕ ಚಿತ್ರದ ಬಗ್ಗೆ ಯಾವುದೇ ಅಪ್‌ಡೇಟ್ ಸಿಕ್ಕಿರಲಿಲ್ಲ. ತೆರೆಮರೆಯಲ್ಲಿ ಚಿತ್ರದ ಕೆಲಸಗಳು ನಡೆಯುತ್ತಿತ್ತು. ಚಿತ್ರೀಕರಣ ಶುರುವಾಗಿದೆ ಎನ್ನುವ ಗುಸುಗುಸು ಕೂಡ ಕೇಳಿಬಂದಿತ್ತು. ಆದರೆ ಆ ಬಗ್ಗೆ ಚಿತ್ರತಂಡ ಪ್ರತಿಕ್ರಿಯಿಸಿರಲಿಲ್ಲ. ಅಂತೂ ಇದೀಗ ಚಿತ್ರೀಕರಣಕ್ಕೆ ಅಣಿಯಾಗಿದೆ. ಮುಂದಿನ ವರ್ಷ ಏಪ್ರಿಲ್ 10ಕ್ಕೆ ಸಿನಿಮಾ ತೆರೆಗಪ್ಪಳಿಸುತ್ತಾ ಕಾದು ನೋಡಬೇಕಿದೆ.