Current Date 15 Oct, 2026

ಯಶ್ ವೃತ್ತಿ ಜೀವನಕ್ಕೆ ತಿರುವು ಕೊಟ್ಟ ಸಿನಿಮಾ ಜುಲೈ 26ಕ್ಕೆ ರೀ- ರಿಲೀಸ್‌

ಸ್ಯಾಂಡಲ್‌ವುಡ್‌ನಲ್ಲಿ ಹಿಟ್ ಸಿನಿಮಾಗಳ ರೀ-ರಿಲೀಸ್ ಟ್ರೆಂಡ್ ಮುಂದುವರೆದಿದೆ. ದೊಡ್ಡ ಸಿನಿಮಾಗಳು ತೆರೆಗೆ ಬರಲು ಹಿಂದು ಮುಂದು ನೋಡುವಂತಾಗಿದೆ. ಸ್ಟಾರ್ ನಟರ ಸಿನಿಮಾ ಬಿಡುಗಡೆಯಾಗದೇ ಚಿತ್ರಮಂದಿರಗಳು ಖಾಲಿ ಹೊಡೆಯುತ್ತಿವೆ. ಹಾಗಾಗಿ ಹಳೇ ಸಿನಿಮಾಗಳನ್ನೇ ಪ್ರದರ್ಶನ ಮಾಡುವ ಪ್ರಯತ್ನ ನಡೀತಿದೆ.

ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದ ಸಂಭ್ರಮದಲ್ಲಿ ತೆರೆಗೆ ಬಂದಿದ್ದ 'ಜಾಕಿ' ಸಿನಿಮಾ ಸೂಪರ್ ಹಿಟ್ ಆಗಿತ್ತು. 13 ವರ್ಷಗಳ ಬಳಿಕ ಅಭಿಮಾನಿಗಳು ಹಬ್ಬದ ರೀತಿ ಚಿತ್ರವನ್ನು ಸ್ವಾಗತಿಸಿದ್ದರು. ಮತ್ತೆ ತೆರೆಮೇಲೆ ನೆಚ್ಚಿನ ನಟನನ್ನು ಕಣ್ತುಂಬಿಕೊಂಡು ಖುಷಿಪಟ್ಟಿದ್ದರು. ಬಳಿಕ ಹಲವು ಸಿನಿಮಾಗಳು ಇದೇ ಹಾದಿ ಹಿಡಿದವು.