ಮಿಲನ ಪ್ರಕಾಶ್ ವಿಚಾರಣೆ ಮಾಡಿದ್ದೇಕೆ ಪೊಲೀಸ್? ಡೆವಿಲ್' ನಿರ್ದೇಶಕರಿಗೂ ದರ್ಶನ್ ಕೇಸ್‌ಗೂ ಏನು ಸಂಬಂಧ?
ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ರನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಲಾಗಿದೆ. ಇತ್ತ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈ ಕೇಸ್‌ಗೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಂಬಂಧಪಟ್ಟವರಿಗೆ ನೋಟಿಸ್ ನೀಡಿ ವಿಚಾರಣೆ ಮಾಡಲಾಗುತ್ತಿದೆ. ಹಾಗೇ ಡೆವಿಲ್ ಸಿನಿಮಾದ ನಿರ್ದೇಶಕ ಮಿಲನ ಪ್ರಕಾಶ್‌ಗೂ ನೋಟಿಸ್ ನೀಡಲಾಗಿತ್ತು
ಈ ಸಂಬಂಧ ದರ್ಶನ್ ನಟಿಸುತ್ತಿದ್ದ 'ಡೆವಿಲ್' ಸಿನಿಮಾದ ನಿರ್ದೇಶಕ ಮಿಲನ ಪ್ರಕಾಶ್ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಸುಮಾರು ಒಂದೂವರೆ ಗಂಟೆಗಳ ಕಾಲ ನಿರ್ದೇಶನ ಮಿಲನ ಪ್ರಕಾಶ್ ಅವರನ್ನು ವಿಚಾರಣೆ ಮಾಡಲಾಗಿದೆ ಎಂದು ವರದಿಯಾಗಿದೆ. ದರ್ಶನ್ ಜೈಲು ಸೇರಿದ ಮೇಲೆ ತೀವ್ರಗೊಂಡ ವಿಚಾರಣೆಯಲ್ಲಿ ಯಶಸ್ಸು ಸೂರ್ಯ, ವಿಲನ ಪ್ರಕಾಶ್ ಅಂತಹ ಹೆಸರುಗಳು ಬಂದಿವೆ