Current Date 15 May, 2026

ಅಭಿಮಾನಿಯ ಎಡವಟ್ಟು; ನೋವಿನಿಂದ ಚೀರಿದ ದರ್ಶನ್

ನಟ ದರ್ಶನ್ ಜೈಲು ಸೇರಿ 4 ತಿಂಗಳಾಗಿದ್ದರೂ ಇನ್ನು ಜಾಮೀನು ಸಿಕ್ಕಿಲ್ಲ. ಬೆನ್ನುನೋವಿನಿಂದ ದರ್ಶನ್ ಬಳಲುತ್ತಿದ್ದು ವೈದ್ಯರು ಫಿಜಿಯೋಥೆರಪಿ ಆರಂಭಿಸಿದ್ದಾರೆ. ಚಿಕಿತ್ಸೆಯ ನೆಪವೊಡ್ಡಿ ದರ್ಶನ್ ಪರ ವಕೀಲರು ಹೈಕೋರ್ಟ್‌ನಲ್ಲಿ ಜಾಮೀನು ಕೊಡಿಸಲು ಪ್ರಯತ್ನಿಸುತ್ತಿದ್ದಾರೆ. 57ನೇ ಸಿಸಿಎಚ್ ಕೋರ್ಟ್‌ನಲ್ಲಿ ದರ್ಶನ್‌ಗೆ ಜಾಮೀನು ಸಿಕ್ಕಿರಲಿಲ್ಲ. ಅಕ್ಟೋಬರ್ 22ರಂದು ಹೈಕೋರ್ಟ್‌ನಲ್ಲಿ ಮೊದಲ ಬಾರಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿತ್ತು. ದರ್ಶನ್ ಪರ ಸಿವಿ ನಾಗೇಶ್ ವಾದ ಮಂಡಿಸುತ್ತಿದ್ದಾರೆ. ಇದೆಲ್ಲದರ ನಡುವೆ ಎಂಆರ್‌ಐ ಸ್ಕ್ಯಾನಿಂಗ್‌ಗಾಗಿ ನಿನ್ನೆ ರಾತ್ರಿ(ಅಕ್ಟೋಬರ್ 22) ಜೈಲಿನಿಂದ ವಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ನೆಚ್ಚಿನ ನಟ ಜೈಲಿನಿಂದ ಹೊರಬರುವ ವಿಚಾರ ತಿಳಿದು ಸಾಕಷ್ಟು ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ತಳ್ಳಾಟ ನೂಕಾಟವೂ ನಡೆಯಿತು.