Current Date 09 May, 2026

"ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ದೇಶವೇ ಬೆರಗಾಗಿ ನೋಡುತ್ತಿದೆ"; ಉಪೇಂದ್ರ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಒಟ್ಟು 13 ಜನ ಆರೋಪಿಗಳನ್ನು ಕಸ್ಟಡಿಗೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ರಮ್ಯಾ, ಸುದೀಪ್ ಬಿಟ್ಟು ಕನ್ನಡದ ಸ್ಟಾರ್ ನಟ-ನಟಿಯರು ಮಾತನಾಡುತ್ತಿಲ್ಲ. ಇದೀಗ ನಟ ಉಪೇಂದ್ರ ತಮ್ಮದೇ ಶೈಲಿಯಲ್ಲಿ ಪೊಲೀಸರ ತನಿಖೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಉಪೇಂದ್ರ ಸುದೀರ್ಘವಾಗಿ ಪೋಸ್ಟ್ ಮಾಡಿದ್ದಾರೆ. "ದರ್ಶನ್ - ರೇಣುಕಾ ಸ್ವಾಮಿ - ಪಾರದರ್ಶಕ ವಿಚಾರಣೆ ... ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ."