Current Date 15 May, 2026

"ಅಭಿಮಾನಿಗಳೇ ದೇವರು ಅಂತ ಕರೆಸಿಕೊಂಡ ರಾಜ್ಯದಲ್ಲಿ ಈ ಘಟನೆ ನಡೆಯಬಾರದಿತ್ತು"; ಕುಮಾರ್ ಬಂಗಾರಪ್ಪ


ಚಾಲೆಂಜಿಂಗ್ ಸ್ಟಾರ್ ದರ್ಶನ್ ಪರಪ್ಪನ ಅಗ್ರಹಾರ ಸೇರಿ ತಿಂಗಳ ಮೇಲಾಗಿದೆ. ಆಗಸ್ಟ್ 1 ರಂದು ದರ್ಶನ್ ನ್ಯಾಯಾಂಗ ಬಂಧನದ ಅವಧಿ ಕೂಡ ಮುಗಿಯಲಿದೆ. ಅಲ್ಲಿ ದರ್ಶನ್‌ಗೆ ಜಾಮೀನು ಸಿಗುತ್ತಾ? ಇಲ್ಲಾ ಮತ್ತೆ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶ ಮಾಡುತ್ತಾ? ಅನ್ನುವ ಕುತೂಹಲವಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಮುಖಂಡ ಹಾಗೂ ನಟ ಕುಮಾರ್ ಬಂಗಾರಪ್ಪ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮತಾಡುವ ವೇಳೆ ಕುಮಾರ್ ಬಂಗಾರಪ್ಪ ಇಂತಹ ಘಟನೆ ನಡೆಯಬಾರದಿತ್ತು ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ, ಅಭಿಮಾನಿಗಳೇ ದೇವರು ಅಂದಿರೋ ರಾಜ್ಯದಲ್ಲಿ ಇಂತಹ ಘಟನೆ ನಡೆದಿದ್ದು ದುರಂತ ಎಂದು ಹೇಳಿಕೆ ಕೊಟ್ಟಿದ್ದಾರೆ.