Current Date 15 Oct, 2026

ಯಶ್ 'ಟಾಕ್ಸಿಕ್' ಸೆಟ್ ಫೋಟೊಗಳು ಲೀಕ್; ನಾನು ಈ ಚಿತ್ರದಲ್ಲಿ ನಟಿಸ್ತಿಲ್ಲ ಎಂದ ಬೆಡಗಿ

ರಾಕಿಂಗ್ ಸ್ಟಾರ್ ಯಶ್ ನಟನೆಯ 'ಟಾಕ್ಸಿಕ್' ಸಿನಿಮಾ ಸದ್ಯ ಸುದ್ದಿಯಲ್ಲಿದೆ. ಅದಕ್ಕೆ ಕಾರಣಕ್ಕೆ ಸಿನಿಮಾ ಸೆಟ್ ಸಂಬಂಧ ನಿರ್ಮಾಣ ಸಂಸ್ಥೆಗೆ ಹೈಕೋರ್ಟ್ ನೋಟಿಸ್ ನೀಡಿರುವುದು. ಅರಣ್ಯ ಭೂಮಿಯಲ್ಲಿ 'ಟಾಕ್ಸಿಕ್' ಸಿನಿಮಾ ಸೆಟ್ ಹಾಕಿದ್ದಾರೆ ಎಂದು ಆರೋಪಿಸಿ ವಕೀಲರಾದ ಜಿ. ಬಾಲಾಜಿ ಪಿಐಎಲ್ ಸಲ್ಲಿಸಿದ್ದಾರೆ.

ಗೀತು ಮೋಹನ್ ದಾಸ್ ನಿರ್ದೇಶನದ 'ಟಾಕ್ಸಿಕ್' ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ನಟ ಯಶ್ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ಮಾಣಕ್ಕೂ ಕೈ ಜೋಡಿಸಿದ್ದಾರೆ. ನಗರದ ಹೆಚ್‌ಎಂಟಿ ಫ್ಯಾಕ್ಟರಿ ಆವರಣದಲ್ಲಿ ಚಿತ್ರಕ್ಕಾಗಿ ಅದ್ಧೂರಿ ಸೆಟ್ ನಿರ್ಮಾಣವಾಗುತ್ತಿದೆ. ಆದರೆ ಚಿತ್ರೀಕರಣಕ್ಕೂ ಮುನ್ನ ಸಂಕಷ್ಟ ಎದುರಾಗಿದೆ.