Current Date 15 May, 2026

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್

'ಮ್ಯಾಕ್ಸ್' ಸಿನಿಮಾ ರಿಲೀಸ್ ಯಾವಾಗ? ಎನ್ನುವ ಮಿಲಿಯನ್ ಡಾಲರ್ ಪ್ರಶ್ನೆಗೆ ಇನ್ನು ಉತ್ತರ ಸಿಕ್ಕಿಲ್ಲ. ಇತ್ತೀಚೆಗ ಟೀಸರ್ ಬಿಡುಗಡೆಯಾಗಿ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಸೆಪ್ಟೆಂಬರ್ 2ಕ್ಕೆ ಸುದೀಪ್ ಹುಟ್ಟುಹಬ್ಬ. ಅದೇ ಸಮಯದಲ್ಲಿ ಸಿನಿಮಾ ತೆರೆಗೆ ಬರಬಹುದು ಎನ್ನುವ ನಿರೀಕ್ಷೆಯಿದೆ.

'ವಿಕ್ರಾಂತ್ ರೋಣ' ಸಿನಿಮಾ ಬಿಡುಗಡೆಯಾಗಿ 2 ವರ್ಷ ಕಳೀತು. ಆದರೆ ಇನ್ನು 'ಮ್ಯಾಕ್ಸ್' ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿಲ್ಲ. ಆ ಬಳಿಕ ಕಿಚ್ಚ ಯಾವ ಸಿನಿಮಾ ಕೈಗೆತ್ತಿಕೊಳ್ಳುತ್ತಾರೆ ಎನ್ನುವ ಬಗ್ಗೆಯೂ ಖಚಿತ ಮಾಹಿತಿಯಿಲ್ಲ. ಈಗಾಗಲೇ ಮೂರ್ನಾಲ್ಕು ಸ್ಕ್ರಿಪ್ಟ್ ಫೈನಲ್ ಮಾಡಿದ್ದಾರೆ. ಜೊತೆಗೆ ಬಿಗ್‌ಬಾಸ್ 11ನೇ ಸೀಸನ್ ಕೂಡ ಹತ್ತಿರವಾಗುತ್ತಿದೆ.