ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ 'ಮಾರ್ಟಿನ್' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಅಕ್ಟೋಬರ್ 11ಕ್ಕೆ ಸಿನಿಮಾ ತೆರಗೆ ತರುವುದಾಗಿ ಚಿತ್ರತಂಡ ಘೋಷಿಸಿದೆ. ಉದಯ್ ಕೆ ಮೆಹ್ತಾ ನಿರ್ಮಾಣದ ಚಿತ್ರಕ್ಕೆ ಎ. ಪಿ ಅರ್ಜುನ್ ಆಕ್ಷನ್ ಕಟ್ ಹೇಳಿದ್ದಾರೆ. ಪಕ್ಕಾ ಆಕ್ಷನ್ ಎಂಟರ್‌ಟೈನರ್ ಚಿತ್ರವನ್ನು ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ತರಲಾಗುತ್ತಿದೆ.
'ಮಾರ್ಟಿನ್' ಸಿನಿಮಾ ಬಿಡುಗಡೆಗೆ ಹೆಚ್ಚು ಕಮ್ಮಿ ಇನ್ನು 3 ತಿಂಗಳು ಕಾಯಬೇಕು. ನಿಧಾನವಾಗಿ ಸಿನಿಮಾ ಪ್ರಮೋಷನ್ ಶುರು ಮಾಡಲು ಚಿತ್ರತಂಡ ಮುಂದಾಗಿದೆ. ಜುಲೈ 29ಕ್ಕೆ ಸಿನಿಮಾ ಟೀಸರ್ ಬಿಡುಗಡೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಧಿಕೃತ ಘೋಷಣೆಗೆ ಚಿತ್ರತಂಡ ಮುಂದಾಗಿದೆ. ವರ್ಷದ ಹಿಂದೆ 'ಮಾರ್ಟಿನ್' ಸಿನಿಮಾ ಟೀಸರ್ ರಿಲೀಸ್ ಆಗಿ ಹಿಟ್ ಆಗಿತ್ತು.