Current Date 25 Aug, 2026

ಈ ವರ್ಷವೂ ಬರ್ತ್‌ಡೇ ಆಚರಣೆ ಇಲ್ಲ ಎಂದ ಗಣೇಶ್; ಕಾರಣ ಅದೇನಾ?


ಗೋಲ್ಡನ್ ಸ್ಟಾರ್ ಗಣೇಶ್ ಈ ವರ್ಷ ಕೂಡ ಅಭಿಮಾನಿಗಳ ಜೊತೆ ಹುಟ್ಟುಹಬ್ಬ ಆಚರಣೆಗೆ ಬ್ರೇಕ್ ಹಾಕಿದ್ದಾರೆ. ಸಹಜವಾಗಿ ಸ್ಟಾರ್ ನಟ-ನಟಿಯರ ಹುಟ್ಟುಹಬ್ಬ ಅಂದ್ರೆ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟುತ್ತದೆ. ನೆಚ್ಚಿನ ನಟನ ನಿವಾಸಕ್ಕೆ ಭೇಟಿ ನೀಡಿ ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ, ಕೈ ಕುಲುಕು ಶುಭಾಶಯ ಕೋರಿ ಜೈಕಾರ ಹಾಕಿ ಸಂಭ್ರಮಿಸುತ್ತಾರೆ.

ಕೊರೊನಾ ಹಾವಳಿ ಶುರುವಾದ ಬಳಿಕ ನಟ ಗಣೇಶ್ ತಮ್ಮ ಹುಟ್ಟುಹಬ್ಬವನ್ನು ಜೋರಾಗಿ ಆಚರಿಸಿಕೊಳ್ಳುವುದು ಕಮ್ಮಿ ಆಗಿದೆ. ಹುಟ್ಟುಹಬ್ಬಕ್ಕೆ ಮುನ್ನ ನಾನು ಈ ಬಾರಿ ಹುಟ್ಟುಹಬ್ಬದ ದಿನ ಮನೆಯಲ್ಲಿ ಇರಲ್ಲ. ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆರ್ಶೀವದಿಸಿ ಎಂದು ಮನವಿ ಮಾಡುತ್ತಾ ಬರುತ್ತಿದ್ದಾರೆ. ಸದ್ಯ 'ಕೃಷ್ಣಂ ಪ್ರಣಯ ಸಖಿ' ಚಿತ್ರದಲ್ಲಿ ಗಣಿ ನಟಿಸಿದ್ದು ಶೀಘ್ರದಲ್ಲೇ ಸಿನಿಮಾ ತೆರೆಗೆ ಬರಲಿದೆ.