ಬೆಂಗಳೂರು: ಡಾರ್ಲಿಂಗ್ ಕೃಷ್ಣ ‘ಫಾದರ್ʼ ಸಿನಿಮಾದ ನಡುವೆಯೇ ಹೊಸ ಸಿನಿಮಾವೊಂದನ್ನು ಅನೌನ್ಸ್ ಮಾಡಿದ್ದಾರೆ.
ಸೂಪರ್ ಹಿಟ್ ಸಿನಿಮಾವನ್ನು ನೀಡಿರುವ ನಿರ್ದೇಶಕ ಶಶಾಂಕ್ ಜೊತೆ ಕೃಷ್ಣ ಮತ್ತೊಂದು ಸಿನಿಮಾವನ್ನು ಮಾಡಲಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲ ಸಮಯದಿಂದ ಹರಿದಾಡಿತ್ತು. ಕೃಷ್ಣ ಈ ಬಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದರು. ಇದೀಗ ಅಧಿಕೃತವಾಗಿ ಸಿನಿಮಾವನ್ನು ಅನೌನ್ಸ್ ಮಾಡಿದ್ದಾರೆ.