ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಜನರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಬಹುತೇಕರು ಈ ಬಗ್ಗೆ ಮೌನ ವಹಿಸಿದ್ದಾರೆ. ಇದೀಗ ಬಹುಭಾಷಾ ನಿರ್ದೇಶಕ ರಾಮ್‌ಗೋಪಾಲ್ ವರ್ಮಾ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸರಣಿ ಟ್ವೀಟ್ ಮಾಡಿದ್ದಾರೆ.
ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿಯನ್ನು ದರ್ಶನ್ & ಗ್ಯಾಂಗ್ ಅಪಹರಿಸಿ ಶನಿವಾರ ಥಳಿಸಿತ್ತು. ಈ ವೇಳೆ ಆತನ ಪ್ರಾಣ ಹೋಗಿದೆ. ಬಳಿಕ ಶವವನ್ನು ಸುಮನಹಳ್ಳಿ ರಿಂಗ್‌ರೋಡ್ ಬಳಿ ಎಸೆಯಲಾಗಿತ್ತು. ಭಾನುವಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 4 ಜನ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು. ವಿಚಾರಣೆ ವೇಳೆ ಶಾಕಿಂಗ್ ಸಂಗತಿಗಳು ಬಯಲಾಗಿತ್ತು. ನಟ ದರ್ಶನ್ ಸೂಚನೆ ಮೇರೆಗೆ ರೇಣುಕಾಸ್ವಾಮಿಯನ್ನು ಅಪಹರಿಸಿ ಕರೆತಂದು ಥಳಿಸಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ.