ಜೆ ಎಂ ಪ್ರಹ್ಲಾದ್ ಅವರ ಕಾದಂಬರಿ ಆಧಾರಿತ ಚಲನಚಿತ್ರ "ಮೂಕ ಜೀವ" ಈ ವಾರ ಬಿಡುಗಡೆಯಾಗುತ್ತಿದೆ. ಹಳ್ಳಿಯ ಬಡ ಕುಟುಂಬದಲ್ಲಿ ಪ್ರಾರಂಭವಾಗುವ ಈ ಕಥೆ ಪಟ್ಟಣದಲ್ಲಿ ಅಂತ್ಯವಾಗುತ್ತದೆ. ಯಾವುದೇ ವ್ಯಕ್ತಿ ತಾನು ಸ್ವಾವಲಂಬಿಯಾಗಿ ಬದುಕಲು ಬೇಕಾದ ಸಹಾಯ, ಮಾರ್ಗದರ್ಶನ ಮತ್ತು ಸಹಾಯ ಪಡೆಯುವ ವ್ಯಕ್ತಿಯು ಸ್ಪಂದಿಸುವ ರೀತಿಯನ್ನು ಎಳೆ ಎಳೆಯಾಗಿ ತೆರೆದಿಡುವ ಪ್ರಯತ್ನವನ್ನು ಈ ಚಲನಚಿತ್ರದಲ್ಲಿ ಮಾಡಲಾಗಿದೆ.