Current Date 18 Oct, 2026

ದರ್ಶನ್‌ಗೆ ಹಾಸಿಗೆ ಇಲ್ಲ.. ಮನೆಯೂಟನೂ ಇಲ್ಲ.. ಪುಸ್ತಕನೂ ಇಲ್ಲ: ಏನಿದು ಮ್ಯಾಟರ್

ಬೆಂಗಳೂರು, ಜುಲೈ 10: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಜುಲೈ 18ರವರೆಗೂ ದರ್ಶನ್‌ಗೆ ನ್ಯಾಯಾಂಗ ಬಂಧನ ಮುಂದುವರೆದಿದೆ. ಇದೇ ವೇಳೆ ದರ್ಶನ್ ಪರ ವಕೀಲರು ದರ್ಶನ್‌ಗೆ ಮನೆ ಊಟ, ಹಾಸಿಗೆ ಹಾಗೂ ಪುಸ್ತಕವನ್ನು ನೀಡುವಂತೆ ಮನವಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು.

ನಟ ದರ್ಶನ್ ಪರ ವಕೀಲರು ಕರ್ನಾಟಕ ಹೈಕೋರ್ಟ್‌ಗೆ ಈ ಮೂರು ಬೇಡಿಕೆಗಳನ್ನು ಮುಂದಿಟ್ಟು ರಿಟ್‌ ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ದರ್ಶನ್‌ಗೆ ಮನೆಯ ಊಟ ಸವಿಯುವುದಕ್ಕೆ ಅವಕಾಶ ಕೊಡಬೇಕು. ಮಲಗಲು ಹಾಸಿಗೆ ಹಾಗೂ ಪುಸ್ತಕವನ್ನು ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಸಲ್ಲಿಸಲಾಗಿತ್ತು. ದರ್ಶನ್ ಕೇಳಿದ ಈ ಮೂರು ಬೇಡಿಕೆಗಳಿಗೆ ಒಪ್ಪಿಗೆ ನೀಡಲು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಿಕೊಂಡಿದ್ದರು.