ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ವಿಚಾರಣಾಧೀನ ಖೈದಿಗಳಾಗಿ ಜೈಲಿನಲ್ಲಿ ಕಾಲ ಕಳೆಯುವಂತಿದೆ. ಸದ್ಯ ನ್ಯಾಯಾಂಗ ಅವಧಿ ಮುಕ್ತಾಯವಾಗುತ್ತಾ ಬಂದಿದೆ. ಹಾಗಾಗಿ ಜಾಮೀನು ಪಡೆಯಲು ಯತ್ನಿಸುವ ಸಾಧ್ಯತೆಯಿದೆ. ಆದರೆ ಅದಕ್ಕೆ ಪೊಲೀಸರು ಆಸ್ಪದ ಮಾಡಿಕೊಳ್ಳುವುದಿಲ್ಲ ಎನ್ನಲಾಗ್ತಿದೆ.
ನಾಳೆ(ಜುಲೈ 18) ಎಲ್ಲಾ 17 ಜನ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗುತ್ತಿದೆ. ಹಾಗಾಗಿ ಮತ್ತೊಮ್ಮೆ ಆರೋಪಿಗಳು ನ್ಯಾಯಾಧೀಶರ ಮುಂದೆ ಹಾಜರಾಗುವ ಸಾಧ್ಯತೆಯಿದೆ. ಈ ಬಾರಿಯೂ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಿಕ್ಕೆ ಸಿದ್ಧತೆ ಮಾಡಲಾಗಿದೆ. ಮತ್ತೆ ರಿಮ್ಯಾಂಡ್ ಅರ್ಜಿ ಸಲ್ಲಿಸಿ ಆರೋಪಿಗಳಿಗೆ ಜಾಮೀನು ನೀಡದಂತೆ ಮನವಿ ಮಾಡುವ ಸಾಧ್ಯತೆಯಿದೆ.