ರೋರಿಂಗ್ ಸ್ಟಾರ್ ಶ್ರೀಮುರಳಿ ಸಿನಿಮಾ ಎರಡು ವಾರಗಳ ಹಿಂದೆ ರಿಲೀಸ್ ಆಗಿದೆ. 'ಉಗ್ರಂ' ಸಿನಿಮಾದ ಬಳಿಕ ಪ್ರಶಾಂತ್ ನೀಲ್ ಕಥೆಯನ್ನು ಹೆಣೆದಿದ್ದರಿಂದ ಸಿನಿಮಾ ಬಗ್ಗೆ ಇನ್ನಿಲ್ಲದ ಕುತೂಹಲವಿತ್ತು. ಅದರಲ್ಲೂ ಕನ್ನಡದ ಮೊದಲ ಸೂಪರ್ ಹೀರೊ ಸಿನಿಮಾ ಆಗಿದ್ದರಿಂದ ಪ್ರೇಕ್ಷಕರಿಗೆ ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದರು.
ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ 'ಬಘೀರ' ಸಿನಿಮಾವನ್ನು ನಿರ್ಮಾಣ ಮಾಡಿತ್ತು. ಮೂರು ವರ್ಷಗಳ ಕಾಲ ಸಮಯ ತೆಗೆದುಕೊಂಡು ಸಿನಿಮಾ ಮಾಡಲಾಗಿತ್ತು. ಬೆಳಕಿನ ಹಬ್ಬ ದೀಪಾವಳಿಗೆ ಈ ಸಿನಿಮಾ ತೆರೆಕಂಡಿದ್ದು ರಜೆಯ ದಿನಗಳಲ್ಲಿ ಈ ಸಿನಿಮಾ ಬಾಕ್ಸಾಫೀಸ್ ಅನ್ನು ಲೂಟಿ ಮಾಡಿತ್ತು.