Current Date 25 Aug, 2026

Bagheera OTT: 'ಬಘೀರ' ಓಟಿಟಿ ರಿಲೀಸ್ ಡೇಟ್ ಘೋಷಣೆ; 22 ದಿನಕ್ಕೆ ಸ್ಟ್ರೀಮಿಂಗ್

ಡಾ. ಸೂರಿ ನಿರ್ದೇಶನದ 'ಬಘೀರ' ಸಿನಿಮಾ ಬಾಕ್ಸಾಫೀಸ್ ಶೇಕ್ ಮಾಡಿದೆ. ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಿದ್ದ ಸಿನಿಮಾ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಶ್ರೀಮುರಳಿ ನಟನೆ, ಮೇಕಿಂಗ್, ಆಕ್ಷನ್ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಈ ವರ್ಷದ ಕನ್ನಡದ ಬೆಸ್ಟ್ ಚಿತ್ರಗಳ ಲಿಸ್ಟ್‌ನಲ್ಲಿ 'ಬಘೀರ' ಕೂಡ ಇದೆ.

ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ನಿರ್ಮಾಣದ 'ಬಘೀರ' ಸಿನಿಮಾ ದೀಪಾವಳಿ ಸಂಭ್ರಮದಲ್ಲಿ ಅಕ್ಟೋಬರ್ 31ಕ್ಕೆ ತೆರೆಗೆ ಬಂದಿತ್ತು. ಚಿತ್ರದಲ್ಲಿ ನಾಯಕಿಯಾಗಿ ರುಕ್ಮಿಣಿ ವಸಂತ್ ಮಿಂಚಿದ್ದಾರೆ. ಇನ್ನುಳಿದಂತೆ ಸುಧಾರಾಣಿ, ಪ್ರಕಾಶ್ ರಾಜ್, ರಂಗಾಯಣ ರಘು, ಗರುಡ ರಾಮ್, ಅಚ್ಯುತ್‌ ಕುಮಾರ್ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿದೆ.