ಬಹಳ ದಿನಗಳ ಬಳಿಕ ಕನ್ನಡದಲ್ಲೊಂದು ಒಳ್ಳೆಯ ಸಿನಿಮಾ ಬಂದಿದೆ. ಇಂತಹದ್ದೊಂದು ಘಳಿಗೆಗಾಗಿ ಸಿನಿಪ್ರಿಯರು ಕಾದು ಕೂತಿದ್ದರು. ಕೊನೆಗೂ 2024ರ ಕೊನೆಯಲ್ಲಿ ಕನ್ನಡ ಚಿತ್ರರಂಗವನ್ನು ಮೆಚ್ಚುವಂತಹ ಸಿನಿಮಾ ಬಂದಿದೆ. ಅದುವೇ ಶಿವರಾಜ್‌ಕುಮಾರ್ ನಟನೆಯ ಸಿನಿಮಾ 'ಭೈರತಿ ರಣಗಲ್'. ಈ ಸಿನಿಮಾ ರಿಲೀಸ್ ಆಗಿ ಈಗಾಗಲೇ ಇಂದು ವಾರಗಳನ್ನು ಯಶಸ್ವಿಯಾಗಿ ಪೂರೈಸಿದೆ.
'ಭೈರತಿ ರಣಗಲ್' ಕನ್ನಡ ಚಿತ್ರರಂಗದ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾಗಳಲ್ಲಿ ಒಂದಾಗಿತ್ತು. ನಿರೀಕ್ಷೆ ಮಾಡಿದಂತೆ ಈ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡುತ್ತಿದೆ. ಮೊದಲ ನಾಲ್ಕು ದಿನ ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡಿತ್ತು. ಅದೇ ಐದನೇ ದಿನದಿಂದ ಸಿನಿಮಾ ಪಾಸಿಟಿವ್ ರೆಸ್ಪಾನ್ಸ್ ಸಿಕ್ಕಿದ್ದರೂ, ಕೊಂಚ ಮಟ್ಟಿಗೆ ಇಳಿಕೆ ಕಂಡಿದೆ. ವೀಕೆಂಡ್‌ನಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತೆ ಎಂದು ನಿರೀಕ್ಷೆ ಮಾಡಲಾಗಿದೆ.