Current Date 15 May, 2026

KGF' ಬಗ್ಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ನುಡಿದಿದ್ದ ಭವಿಷ್ಯ ಏನು?

ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಟನೆಯ 'KGF' ಸಿನಿಮಾ ಬರೆದ ದಾಖಲೆಗಳು ಒಂದೆರಡಲ್ಲ. ಕನ್ನಡ ಸಿನಿಮಾ ಕೂಡ 1000 ಕೋಟಿ ರೂ. ಕಲೆಕ್ಷನ್ ಮಾಡಬಹುದು ಎಂದು ತೋರಿಸಿದ ಸಿನಿಮಾ ಇದು. ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿದ್ದ ಸಿನಿಮಾ ಇಡೀ ಭಾರತೀಯ ಚಿತ್ರರಂಗವೇ ಸ್ಯಾಂಡಲ್‌ವುಡ್‌ನತ್ತ ತಿರುಗಿ ನೋಡುವಂತೆ ಮಾಡಿತ್ತು. 2015ರಲ್ಲಿ ಯಶ್ 'KGF' ಚಿತ್ರಕ್ಕೆ ಸಹಿ ಮಾಡಿದ್ದರು. ಬರೋಬ್ಬರಿ 3 ವರ್ಷಗಳ ಬಳಿಕ ಸಿನಿಮಾ ತೆರೆಗೆ ಬಂದಿತ್ತು. ಫಸ್ಟ್ ಚಾಪ್ಟರ್ ಬ್ಲಾಕ್‌ಬಸ್ಟರ್ ಹಿಟ್ ಆಗಿ 4 ವರ್ಷಗಳ ನಂತರ ಚಾಪ್ಟರ್-2 ತೆರೆಗೆ ಬಂದಿತ್ತು. 'ಮಿ. & ಮಿ ರಾಮಾಚಾರಿ' ಬಳಿಕ ನೀಲ್ ಜೊತೆ ಯಶ್ ಕೈಜೋಡಿಸಿದ್ದರು. ನಡುವೆ 'ಸಂತು ಸ್ಟ್ರೈಟ್ ಫಾರ್ವರ್ಡ್' ಸಿನಿಮಾ ಬಂದು ಹೋಯಿತು.