Current Date 25 Aug, 2026

Shivamma Trailer: ಯರೆಹಂಚಿನಾಳದ 'ಶಿವಮ್ಮ'ನ ಕಥೆ-ವ್ಯಥೆ ಏನು?

ರಿಷಬ್ ಶೆಟ್ಟಿ ನಿರ್ದೇಶಕರಾಗಿ, ಹೀರೊ ಆಗಿ ಮಾತ್ರವಲ್ಲದೇ ನಿರ್ಮಾಪಕರಾಗಿಯೂ ಗುರ್ತಿಸಿಕೊಂಡಿದ್ದಾರೆ. ತಮ್ಮದೇ ಬ್ಯಾನರ್‌ನಲ್ಲಿ ಕಡಿಮೆ ಬಜೆಟ್ ಸಿನಿಮಾ ನಿರ್ದೇಶಿಸುವ ರಿಷಬ್ ಆಗಾಗ್ಗೆ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುತ್ತಾರೆ. ಸದ್ಯ ರಿಷಬ್ ಶೆಟ್ಟಿ ಫಿಲ್ಮ್ಸ್ ಸಂಸ್ಥೆಯ ಮತ್ತೊಂದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.

ಜಯಶಂಖರ್ ಆರ್ಯರ್ ನಿರ್ದೇಶನದ 'ಶಿವಮ್ಮ' ಸಿನಿಮಾ ಜೂನ್ 14ಕ್ಕೆ ತೆರೆಗೆ ಬರ್ತಿದೆ. ಸದ್ಯ ಟ್ರೈಲರ್ ಬಿಡುಗಡೆ ಆಗಿದೆ. ಯರೆಹಂಚಿನಾಳ ಎನ್ನುವ ಊರಿನಲ್ಲಿ ನಡೆಯುವ ಕಥೆ ಚಿತ್ರದಲ್ಲಿದೆ. ಈಗಾಗಲೇ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಸಿನಿಮಾ ಪ್ರಶಸ್ತಿಗಳನ್ನು ಗೆದ್ದಿದೆ. ಭಾರೀ ಮೆಚ್ಚುಗೆ ಗಳಿಸಿದೆ. ಅಂತೂ ಇಂತೂ ಇದೀಗ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿದೆ.