Current Date 15 Oct, 2026

SIIMA 2024: ಸೈಮಾ ನಾಮಿನೇಷನ್ ರೇಸ್‌ನಲ್ಲಿ ಪೈಪೋಟಿಗೆ ಬಿದ್ದ 'ಕಾಟೇರ', 'ಸಪ್ತ ಸಾಗರದಾಚೆ ಎಲ್ಲೋ ಸೈಡ್-ಎ'

ಸೌತ್ ಇಂಡಿಯನ್ ಇಂಟರ್‌ನ್ಯಾಷನಲ್‌ ಅವಾರ್ಡ್ ಅಂದ್ರೆ, ಸೈಮಾ ಪ್ರಶಸ್ತಿ ಸಮಾರಂಭ ಮತ್ತೆ ಶುರುವಾಗುತ್ತಿದೆ. 2024ನೇ ಸಾಲಿನ ದಕ್ಷಿಣ ಭಾರತದ ಈ ಪ್ರತಿಷ್ಠಿತ ಪ್ರಶಸ್ತಿ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಆಯೋಜಕರು ತೀರ್ಮಾನಿಸಿದ್ದಾರೆ. ಸೈಮಾ ಪ್ರಶಸ್ತಿಯನ್ನು ದಕ್ಷಿಣ ಭಾರತದಲ್ಲಿ ನಿರ್ಮಾಣ ಆದ ಸಿನಿಮಾಗಳಿಗೆ ಮಾತ್ರ ನೀಡಲಾಗುತ್ತಿದೆ.

2024ರಲ್ಲಿ ದಕ್ಷಿಣ ಭಾರತದ ನಾಲ್ಕು ಪ್ರಮುಖ ಭಾಷೆಗಳಾದ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ತೆರೆಕಂಡ ಸಿನಿಮಾಗಳಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕಳೆದ ವರ್ಷ ಕನ್ನಡದಲ್ಲಿ ಹೇಳಿಕೊಳ್ಳುವಂತಹ ಸಿನಿಮಾ ಬಾರದೇ ಇದ್ದರೂ, ಎರಡು ಸಿನಿಮಾಗಳು ನಾಮಿನೇಷನ್ ಪ್ರಕ್ರಿಯೆಯಲ್ಲಿ ಸಿಕ್ಕಾಪಟ್ಟೆ ಪೈಪೋಟಿಗೆ ಬಿದ್ದಿವೆ. ಅದು 'ಕಾಟೇರ' ಹಾಗೂ 'ಸಪ್ತ ಸಾಗರದಾಚೆ ಎಲ್ಲೋ ಸೈಡ್ ಎ'.