Current Date 09 May, 2026

ಪ್ರಭಾಸ್- ತಾರಕ್ ಫ್ಯಾನ್ಸ್ ಮಧ್ಯೆ ತಗ್ಲಾಕಿಕೊಂಡು ಪ್ರಶಾಂತ್ ನೀಲ್ ಫಜೀತಿ!

ಸ್ಟಾರ್‌ ನಟರಿಗೆ ಅಭಿಮಾನಿಗಳು ಹೆಚ್ಚು. ಆ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಅವರಿಗಾಗಿ ಸ್ಟಾರ್ಸ್ ನಿರ್ಧಾರಗಳನ್ನು ತೆಗೆದುಕೊಳ್ಳುವಂತಹ ಸಂದರ್ಭಗಳು ಬಂದುಬಿಡುತ್ತವೆ. ಒಂದರ್ಥದಲ್ಲಿ ತಮ್ಮ ನೆಚ್ಚಿನ ನಟನನ್ನು ಅಭಿಮಾನಿಗಳು ಹತೋಟಿಗೆ ತೆಗೆದುಕೊಂಡಂತೆ. ಇದಕ್ಕೆ ಸೋಶಿಯಲ್ ಮೀಡಿಯಾ ವೇದಿಕೆ ಸಿಕ್ಕಿ ಮತ್ತಷ್ಟು ಬಲ ಬಂದಂತೆ ಆಗಿದೆ. ಅಭಿಮಾನಿಗಳ ಒತ್ತಡಕ್ಕೆ ಮಣಿದು ನಟರು ಕೆಲಸ ಮಾಡುವಂತಾಗುತ್ತಿದೆ.

ಇತ್ತೀಚೆಗೆ 'ಮ್ಯಾಕ್ಸ್' ಸಿನಿಮಾ ಅಪ್‌ಡೇಟ್ ಬೇಕು ಎಂದು ಅಭಿಮಾನಿಗಳ ಒತ್ತಡ ಹೆಚ್ಚಾದಾಗ ನಟ ದರ್ಶನ್ ಸುದೀಪ್ ಪ್ರತಿಕ್ರಿಯಿಸಬೇಕಾಯಿತು. "ಬೇರೆ ನಟರ ಸಿನಿಮಾಗಳು ಬಿಡುಗಡೆ ಆಗಿದೆ ಎಂದು ಅಥವಾ ಬೇರೆ ನಟರಿಗೆ ಪೈಪೋಟಿ ಕೊಡಬೇಕೆಂದು ಅಪ್‌ಡೇಟ್ ಕೊಡುವುದಕ್ಕೆ ಸಾಧ್ಯವಿಲ್ಲ. ಚಿತ್ರತಂಡ ಏನಾದರೂ ರಿಲೀಸ್ ಮಾಡಲು ಅಥವಾ ಘೋಷಿಸಲು ಸಿದ್ಧವಿದ್ದಾಗ ಮಾತ್ರ ಅಪ್‌ಡೇಟ್ ಕೊಡಲು ಸಾಧ್ಯ" ಎಂದಿದ್ದರು. ಇದೀಗ ತೆಲುಗು ಚಿತ್ರರಂಗದಲ್ಲಿ ಪ್ರಭಾಸ್ ಫ್ಯಾನ್ಸ್ ಹಾಗೂ ತಾರಕ್ ಫ್ಯಾನ್ಸ್ ಮಧ್ಯೆ ಪೈಪೋಟಿ ಏರ್ಪಟ್ಟಿದೆ.