Current Date 18 Oct, 2026

ವೀಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್‌ಗೆ ದರ್ಶನ್ & ಗ್ಯಾಂಗ್ ಹಾಜರ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಜನ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಜೂನ್ 11ರಂದು ನಟ ದರ್ಶನ್ ಬಂಧನವಾಗಿತ್ತು. 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿತ್ತು. ಬಳಿಕ ಎಸಿಎಂಎಂ ನ್ಯಾಯಾಲಯ ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಇಂದು(ಜುಲೈ 4) ನ್ಯಾಯಾಂಗ ಬಂಧನ ಮುಕ್ತಾಯವಾದ ಹಿನ್ನೆಲೆಯಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ನ್ಯಾಯಾಧೀಶರ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ಇದೀಗ ಮತ್ತೆ ಕೋರ್ಟ್ 14 ದಿನಗಳ ಕಾಲ ಅಂದರೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿದೆ. ಹೀಗಾಗಿ ಸದ್ಯಕ್ಕೆ ದರ್ಶನ್ & ಗ್ಯಾಂಗ್‌ಗೆ ಜೈಲೇ ಗತಿ ಎನ್ನುವಂತಾಗಿದೆ.