Current Date 25 Aug, 2026

ಇದು ನಮ್ ಶಾಲೆ ಚಿತ್ರದ ಸಾಂಗ್ ರಿಲೀಸ್ ಮಾಡಿ ಐಪಿಎಸ್ ಅಧಿಕಾರಿ

ಇದು ನಮ್ ಶಾಲೆ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರೆವೇರಿತು. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಮೊದಲ ಹಾಡನ್ನು ಖ್ಯಾತ ಐ ಪಿ ಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್  (Ravi Channannavar) ಬಿಡುಗಡೆ ಮಾಡಿದರು. ಎರಡನೇ ಗೀತೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಅನಾವರಣಗೊಳಿಸಿದರು. ಇದೇ ಸಮಯದಲ್ಲಿ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಯಿತು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.